ಬಾಳಿಗೊಂದು ನಂಬಿಕೆ - Baligondu Nambike(DVG)
- ₹100₹90
ಡಿ.ವಿ.ಜಿ. ನಾಮಾಂಕಿತ ಡಿ.ವಿ.ಗುಂಡಪ್ಪನವರು ಹುಟ್ಟಿದ್ದು ೧೮೮೭ರಲ್ಲಿ, ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ. ‘ಮಂಕುತಿಮ್ಮನ ಕಗ್ಗ’ ದಂತಹ ಕೃತಿಯ ಮೂಲಕ ಸಂಸ್ಕೃತಿ, ಮೌಲ್ಯ, ಅಧ್ಯಾತ್ಮ, ತಾತ್ವಿಕ ಚಿಂತನೆ, ಜೀವನದರ್ಶನಗಳನ್ನು ಮಾಡಿಸಿದ ಗುಂಡಪ್ಪನವರ ತಂದೆ ದೇವನಹಳ್ಳಿ ವೆಂಕಟರಮಣಯ್ಯ, ತಾಯಿ ಅಲಮೇಲು. ೧೦ ರಾಜಕೀಯ ಕೃತಿಗಳೂ ಸೇರಿ ಸುಮಾರು ೭೦ ಕೃತಿಗಳು ಪ್ರಕಟಗೊಂಡಿದ್ದರೆ ಇವರನ್ನು ಕುರಿತು ಇತರರು ಬರೆದಿರುವ ಕೃತಿಗಳೇ ಸುಮಾರು ೧೭. ಡಿ.ವಿ.ಗುಂಡಪ್ಪನವರು ೧೯೩೨ ರಲ್ಲಿ ಮಡಿಕೇರಿಯಲ್ಲಿ ನಡೆದ ೧೮ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರಾಗಿದ್ದರು. ೧೯೩೫ ರಲ್ಲಿ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಸ್ಥಾಪಿಸಿದರು. ೧೯೬೧ ರಲ್ಲಿ ಡಿ ವಿ ಜಿ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಿ. ಲಿಟ್. ಪದವಿ ನೀಡಿ ಗೌರವಿಸಿತು. ಇದು ಡಿ ವಿ ಜಿ ಅವರು ಪತ್ರಿಕೋದ್ಯಮ ಹಾಗೂ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆಗಾಗಿ ಸಂದ ಪುರಸ್ಕಾರ. ೧೯೬೭ ರಲ್ಲಿ ಶ್ರೀಮದ್ಭಗವದ್ಗೀತಾ ತಾತ್ಪರ್ಯ ಎಂಬ ಗ್ರಂಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತು. ೧೯೭೩ ರಲ್ಲಿ ಡಿ ವಿ ಜಿ ಸನ್ಮಾನ ಸಮಿತಿ ಇವರಿಗೆ ಒಂದು ಲಕ್ಷ ರೂಪಾಯಿಗಳ ಗೌರವ ಧನ ಸಮರ್ಪಿಸಿತು. ಇದನ್ನು ತಾವೇ ಸ್ಥಾಪಿಸಿದ ಗೋಖಲೆ ಸಂಸ್ಥೆಗೆ ದಾನ ಮಾಡಿದರು. ೧೯೭೪ ರಲ್ಲಿ ಭಾರತ ಸರ್ಕಾರ "ಪದ್ಮಭೂಷಣ ಪ್ರಶಸ್ತಿ" ನೀಡಿ ಗೌರವಿಸಿತು. ಕವಿಯಾಗಿ, ಪತ್ರಿಕೋದ್ಯಮಿಯಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಸಾಹಿತಿಯಾಗಿ, ಸಾಧಕರಾಗಿ, ನಾಡುನುಡಿಯ ಸೇವಕರಾಗಿದ್ದ ಡಿ.ವಿ.ಜಿ.ಯವರು ಈ ಎಲ್ಲ ರಂಗಗಳಿಂದಲೂ ನಿರ್ಗಮಿಸಿದ್ದು ೧೯೭೫ರ ಅಕ್ಟೋಬರ್ ೭ ರಂದು.
Author | |
DVG | |
Publisher | |
Sahitya Prakashana |
Reviews
There are no reviews for this product.