₹380
Ex Tax: ₹380
ಕಾದಂಬರಿ ಕರತಲ ರಂಗಭೂಮಿ. ಅಂಗೈಮೇಲಣ ನಾಟಕಶಾಲೆ. ಆದ್ದರಿಂದ ಕಾದಂಬರಿಯನ್ನು ಓದುವ ವಾಚಕರು ನಾಟಕವನ್ನು ನೋಡುವ ಪ್ರೇಕ್ಷಕರೂ ಆಗಬೇಕಾಗುತ್ತದೆ. ಈ ಕಾದಂಬರಿಯನ್ನು ಓದುವವರಲ್ಲಿ ಒಂದು ವಿಜ್ಞಾಪನೆ. ಇದನ್ನು ಕಥೆಯ ಕೋಲಾಹಲಕ್ಕಾಗಿ ಓದಬೇಡಿ. ಸಾವಧಾನವಾಗಿ ಸಚಿತ್ರವಾಗಿ ಸಜೀವವಾಗಿ ಓದಿ. ಇಲ್ಲಿ ಚಿತ್ರಿತವಾಗಿರುವುದು ಮಲೆನಾಡಿನ ಬಾಳಿನ ಕಡಲಿನಲ್ಲಿ ಒಂದು ಹನಿ. ಅನೇಕರಿಗೆ ಅದು ಸಂಪೂರ್ಣವಾಗಿ ಹೊಸ ಪ್ರಪಂಚವಾಗುತ್ತದೆ. ಹೊಸ ಊರಿಗೆ ಹೋಗುವವರು ಅಲ್ಲಿಯ ಜನ ಮತ್ತು ಜೀವನದ ವಿಚಾರಕ್ಕಾಗಿ ತಟಕ್ಕನೆ ಯಾವ ನಿರ್ಣಯಗಳನ್ನೂ ಮಾಡಿಕೊಳ್ಳದೆ ಸ್ವಲ್ಪಕಾಲ ತಾಳ್ಮೆಯಿಂದಿದ್ದು ಕ್ರಮೇಣ ಬಳಕೆಯಿಂದ ಜನರನ್ನೂ ಜೀವನವನ್ನೂ ಪರಿಚಯ ಮಾಡಿಕೊಳ್ಳುವಂತೆ ಈ ಕಾದಂಬರಿಯ ಅರಣ್ಯಜಗತ್ತನ್ನು ಪ್ರವೇಶಿಸುವ ವಾಚಕರು ವರ್ತಿಸಬೇಕಾಗುತ್ತದೆ. ಎಂದರೆ, ಮೊದಲನೆಯ ಸಾರಿ ಓದಿದೊಡನೆ ಎಲ್ಲವನ್ನೂ ಪೂರೈಸಿದೆವು ಎಂದುಕೊಳ್ಳುವವರು, ಮೋಟಾರಿನಲ್ಲಿ ಕುಳಿತು ಒಂದೂರಿನ ಪೂರ್ವದ್ವಾರದಿಂದ ಒಳನುಗ್ಗಿ, ಅದರ ಬೀದಿಗಳಲ್ಲಿ ಸರ್ರನೆ ಸಂಚರಿಸಿ, ಪಶ್ಚಿಮ ದ್ವಾರದಿಂದ ಹೊರಹೊರಟು, ಆ ಊರಿನ ಪೂರ್ಣಪರಿಚಯ ಮಾಡಿಕೊಂಡಿದ್ದೇವೆ ಎನ್ನುವವರಂತೆ ಹಾಸ್ಯಾಸ್ಪದರಾಗುತ್ತಾರೆ. ಈ ಕಾದಂಬರಿಯನ್ನು ರಚಿಸುವಾಗಲೂ, ತರುವಾಯ ಮತ್ತೆ ಮತ್ತೆ ಓದುವಾಗಲೂ ಬಹುವಾಗಿ ಬಂದಿರುವ ರಸಸುಖದಲ್ಲಿ ಒಂದಿನಿತನ್ನಾದರೂ ಇದನ್ನು ಓದುವವರು ಸವಿಯುತ್ತಾರೆಂದು ಗೊತ್ತಾದರೆ ಈ ಕೃತಿ ಸಾರ್ಥಕವಾಗುತ್ತದೆ...
Add to Cart