ಶ್ರೀಕೃಷ್ಣ - ಪುರುಷ ಪುರುಷೋತ್ತಮನಾದ ಕಥೆ(ರುದ್ರಮೂರ್ತಿ ಶಾಸ್ತ್ರಿ ಸು) - Srikrishna puruṣha purusottamanada kathe(Rudramurthy Sastry S)
- ₹650₹575
ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು 16 ಕಾವ್ಯ ಕೃತಿಗಳು. ಕಾದಂಬರಿ-ಧರ್ಮಚಕ್ರವರ್ತಿ ಅಶೋಕ, ಔರಂಗಜೇಬ, ಕುಮಾರರಾಮ, ಚಾಣಕ್ಯ, ಸರ್ವಜ್ಞ, ಚಾರುದತ್ತ, ಬಣ್ಣದ ಹಕ್ಕಿ, ಸ್ವಪ್ನಗಾನ, ರಾಧಾರಜನಿ, ಮಣ್ಣಿನ ಋಣ ಹೀಗೆ ಸಾಮಾಜಿಕ, ಐತಿಹಾಸಿಕ ಕಾದಂಬರಿಗಳು ಸೇರಿ 30 ಕೃತಿ ರಚಿಸಿದ್ದು, ಮಕ್ಕಳ ಸಾಹಿತ್ಯಕ್ಕೂ ಅಪಾರ ಕೊಡುಗೆ ನೀಡಿದ್ದಾರೆ.
Reviews
There are no reviews for this product.