ಕವಲು - Kavalu(S L Bhyrappa) -ದಪ್ಪ - Harbound
- ₹395
ಕಾನಿಸ್ಟೇಬಲ್ ನಂಜುಂಡೇ ಗೌಡ ಮುಗುಳ್ನಕ್ಕ. ಹಳ್ಳಿಯ ಅಭ್ಯಾಸದ ಅವನ ನಗೆಯಲ್ಲಿ ಮುಗುಳು ಮತ್ತು ಗಟ್ಟಿ ನಗೆಗಳ ವ್ಯತ್ಯಾಸ ಹೆಚ್ಚು ಗೊತ್ತಾಗಲಿಲ್ಲ. ‘ಯಾಕೆ ನಗ್ತೀರ ?’ ಕಂಬಿಗಳ ಒಳಗಿದ್ದ, ಬಿ.ಇ. ಓದಿ ಉದ್ಯಮಪತಿಯಾದ ಇವನು ಕೇಳಿದ.
‘ಓದಿದ ಗಂಡಸರೆಲ್ಲ ಎಂಗಸರಾಯ್ತಾರೆ. ಓದಿದ ಎಂಗಸರೆಲ್ಲ ಗಂಡಸರಾಯ್ತಾರೆ.’ ಎಂದು ಅವನು ಈಗ ಗಟ್ಟಿಯಾಗಿ ನಕ್ಕ.
* * *
‘ಯು ಆರ್ ಮೈ ಕಸಿನ್,’ ಬೆಂಗಳೂರಿನ ಅವಳು ಹಳ್ಳಿ ಮನೆಯ ಹಿತ್ತಲಿನ ಪರಂಗಿ ಗಿಡದ ಹತ್ತಿರ ಅವನನ್ನು ಮಾತನಾಡಿಸಿದಳು.
‘ನಿನಗೆ ಯಾರು ಇಂಗ್ಲಿಷ್ ಹೇಳಿಕೊಟ್ಟೋರು?’ ಅವನು ಒರಟಾಗಿ ಕೇಳಿದ, ಅವಳ ಸ್ಕೂಲಿನ ಯಾವ ಮಿಸ್ಸಿಗೂ ಇಲ್ಲದ ಒರಟಿನಿಂದ. ಇವನೇನು ನನಗೆ ಟೀಚರಾ ಎಂದು ಅವಳಿಗೆ ರೇಗಿತು.
‘ನನ್ನ ಮಿಸ್ಸು.ನನ್ನ ಮಮ್ಮಿ. ನನ್ನ ಮಮ್ಮಿ ಇಂಗ್ಲಿಷ್ ರೀಡರ್.’
‘ಸರಿಯಾಗಿ ತಿಳಕ. ನಾನು ನಿನಗೆ ಕಸಿನ್ ಅಲ್ಲ. ಬ್ರದರ್. ಅಂದರೆ ಅಣ್ಣ . ನೀನು ನನಗೆ ಸಿಸ್ಟರ್. ಅಂದರೆ ತಂಗಿ,’ ಎಂದ.
‘ಆದರೆ ನನ್ನ ಡ್ಯಾಡಿ ಮಮ್ಮಿ ಬೇರೆ. ನಿನ್ನ ಅಪ್ಪ ಅಮ್ಮ ಬೇರೆ,’ ಅವಳ ಅನುಮಾನ ಬಗೆಹರಿಯಲಿಲ್ಲ.
‘ಬೇರೆ ಆದರೇನು? ನಿನ್ನಪ್ಪ ನಮ್ಮಪ್ಪನಿಗೆ ಅಣ್ಣ. ನೀನು ನನಗಿಂತ ಚಿಕ್ಕೋಳು. ಆದ್ದರಿಂದ ನಾನು ನಿನಗೆ ಅಣ್ಣ. ನಿನಗೆ ಇಂಗ್ಲಿಷ್ ಹೇಳಿಕೊಟ್ಟೋರಿಗೆ ಬುದ್ದಿ ಇಲ್ಲ,’ ಅವನು ಮೇಷ್ಟರಗಿರಿ ಮಾಡಿದ.
***
ಭಾರತೀಯ ಸಮಾಜದಲ್ಲಿ ಕವಲುದಾರಿ ಹಿಡಿಯುತ್ತಿರುವ ಮೌಲ್ಯಗಳನ್ನು ಹೃದಯ ಕಲಕುವಂತೆ ಶೋಧಿಸುತ್ತಾ ಸಮಕಾಲೀನ ಜೀವನಕ್ಕೆ ಕನ್ನಡಿಯಾಗಿರುವ ಕಾದಂಬರಿ ಇದು.
Author | |
SL Bhyrappa | |
Publisher | |
Saahitya Bhandara |
Reviews
There are no reviews for this product.
Related Products
ನಲವತ್ತು ವರ್ಷಗಳ ಹಿಂದೆ ‘ಪರ್ವ’ದಲ್ಲಿ ದ್ರೌಪದಿ, ಕುಂತಿ, ಗಾಂಧಾರಿಯರನ್ನು ಚಿತ್ರಿಸಿದ ಭೈರಪ್ಪನವರು ಇಲ್ಲಿ ರಾಮಕಥೆ ಯನ್ನು ಸೀತೆಯ ಅನುಭವ ಮತ್ತು ಚಿಂತನೆಯ ಮೂಲಕ ಮೂಡಿಸಿದ್ದಾರೆ. ಮೂಲ ವಾಲ್ಮೀಕಿ ರಾಮಾಯಣದಲ್ಲಿ ಸೀತಾ ಪರಿತ್ಯಾಗವು ಉತ್ತರ ಕಾಂಡದಲ್ಲಿ ಬರುತ್ತದೆ.‘ಜೋಡಿ ಹಕ್ಕಿಗಳಲ್ಲಿ ಬೇಡನು ಒಂದನ್ನು ಹೊಡೆದು ಅಗಲಿಸಿದ ನೋವಿನ ಭಾವವನ್ನು ವ್ಯಕ್ತಪಡಿಸಲು ನಾನು ರಾಮ ಸೀತೆಯರ ಜೀವನವನ್ನು ಬಳಸಿಕೊಂಡೆ. ಇದನ್ನಾದರೂ ಸುಖಾಂತ್ಯ ಮಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಕವಿಯು ಏನನ್ನು ತಾನೆ ಬದಲಿಸಬಲ್ಲ? ಎಂಬ ವೈಫಲ್ಯ ಬಾಧಿಸುತ್ತಿದೆ,’ ಎಂದು ವಾಲ್ಮೀಕಿಮಹರ್ಷಿಗಳು ಶೋಕದಲ್ಲಿ ಮುಳುಗುತ್ತಾರೆ...
Add to Cart೧೫೦ ಅಡಿ ಅಗಲ, ೩೦೦ ಅಡಿ ಉದ್ದದ ಆಕಾಶ ನೌಕೆಯನ್ನು ಕಟ್ಟಿ ಅದರಲ್ಲಿ ಒಬ್ಬ ಗಂಡು, ಒಬ್ಬಳು ಹೆಣ್ಣನ್ನು ಕೂರಿಸಿ ೪.೬ ಜ್ಯೋತಿರ್ವರ್ಷ ದೂರದಲ್ಲಿರುವ ಪ್ರಾಕ್ಸಿಮಾ ಸೆಂಟಾರಿಸ್ ನಕ್ಷತ್ರಮಂಡಲವನ್ನು ತಲುಪುವ ಯೋಜನೆಗೆ ಕಳಿಸುತ್ತಾರೆ. ಸೂರ್ಯಮಂಡಲದಲ್ಲಿ ಸೃಷ್ಟಿಸಿಕೊಂಡ ನೈತಿಕ ನಿಯಮಗಳು ಸೂರ್ಯನ ಗುರುತ್ವಾಕರ್ಷಣೆಯ ವಲಯದ ಆಚೆಗೆ ಹೋದಮೇಲೂ ಸಿಂಧುವಾಗುತ್ತವೆಯೆ ? ಎಂಬಂಥ ಪ್ರಶ್ನೆಗಳನ್ನು ಈ ಪಾತ್ರಗಳು ಎದುರಿಸಬೇಕಾಗುತ್ತದೆ.ಭೈರಪ್ಪನವರ ಪಾತ್ರಶೋಧನೆಯು ಇದುವರೆಗೆ ವಿಸ್ತರಿಸಿಕೊಂಡಿರದ ವ್ಯಾಪ್ತಿಗೆ ‘ಯಾನ’ದಲ್ಲಿ ಬೆಳೆದಿದೆ. ಕನ್ನಡ ಸಾಹಿತ್ಯದಲ್ಲಿ ಇಲ್ಲಿಯತನಕ ಕಾಣದ ವಸ್ತುವು ಈ ಕಾದಂಬರಿಯಲ್ಲಿ ಜೀವಂತವಾಗಿ ಮೂಡಿಬಂದಿದೆ.ಪ್ರಕಾಶಕರು – ಸಾಹಿತ್ಯ ಭಂಡಾರ..
Add to Cartಎಷ್ಟೋ ಹೊತ್ತಿನ ನಂತರ ಭೋಸ್ಲೆಯ ಧ್ವನಿ: ‘ಕಲೆಯನ್ನ ನೋಡಿದಾಗ ಸ್ವರ್ಗಪ್ರವೇಶ ಮಾಡಿದ ಹಾಗಾಗುತ್ತೆ. ಕಲಾವಿದನ ಒಳ ಹೊಕ್ಕಾಗ ಬೇರೆಯೇ ಇರುತ್ತೆ ಯಾಕೆ ಈ ಕಾಂಟ್ರಡಿಕ್ಷನ್ ?’..
Add to Cartಸಾರ್ಥದ ಮರ್ಮವನ್ನು ತಿಳಿಯಲು ಮನೆ ಮಾರು ಬಿಟ್ಟುಹೋದ ನಾಗಭಟ್ಟನು ತನ್ನ ಗುರಿಯಿಲ್ಲದ ಸಂಚಾರಿಪರಿಕ್ರಮದಲ್ಲಿ ಜನಪದದ ಜೀವನಾಡಿಯಂತಿದ್ದ ಹತ್ತಾರು ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರವೃತ್ತಿಗಳ ಪ್ರಭಾವಕ್ಕೊಳಗಾಗಿ ಆಚ್ಚರಿಯ ಜೀವನದರ್ಶನಕ್ಕೆ ಸಾಕ್ಷಿಯಾಗುತ್ತಾನೆ .‘ಸಾರ್ಥ’ ಕ್ರಿ .ಶ. ಎಂಟನೆಯ ಶತಮಾನದ ಭರತಖಂಡದಲ್ಲಿ ನಡೆಯಿತೆಂದು ಕಲ್ಪಿಸಿಕೊಳ್ಳಬೇಕಾದ ಸಂಗತಿಗಳನ್ನಾಧರಿಸಿದ ಕಾದಂಬರಿ. ಆನೆ ಕುದುರೆ ಹೇಸರಗತ್ತೆ ನೂರಾರು ಗಾಡಿಗಳ ಮೇಲೆ ವಾಣಿಜ್ಯ ಪದಾರ್ಥಗಳನ್ನು ಹೇರಿಕೊಂಡು ವ್ಯಾಪಾರ ಮಾಡುತ್ತ ದೂರ ದೂರ ದೇಶಗಳಲ್ಲಿ ಸಂಚರಿಸುವುದನ್ನು ಆ ಕಾಲದಲ್ಲಿ ‘ಸಾರ್ಥ’ ಎನ್ನುತಿದ್ದರು .ಭಾರತದ ಇತಿಹಾಸದ ಒಂದು ಸ್ಥಿತ್ಯಂತರ ಅವಧಿಯ ಈ ಕಾದಂಬರಿಯಲ್ಲಿ ಅಪೂರ್ವ ಅನುಭವ ಮತ್ತು ಪಾತ್ರಗಳು ಒಡಮೂಡಿವೆ. ಆಳವೂ ವಿಸ್ತಾರವೂ ಆದ ಐತಿಹಾಸಿಕ ಅಧ್ಯನಯದ ಅಡಿಪಾಯದ ಮೇಲೆ ಶಕ್ತ ಸೃಜನಶೀಲತೆಯು ಕೆಲಸಮಾಡಿ ಈ ವಿಶಿಷ್ಟ ಕಾದಂಬರಿಯನ್ನು ನಿರ್ಮಿಸಿದೆ .ಭಾರತವು ಸತತವಾಗಿ ಎದುರಿಸುತ್ತಿರುವ ಧಾರ್ಮಿಕ ಸಂಘರ್ಷಗಳ ತಾತ್ತ್ವಿಕಬೇರುಗಳನ್ನು ‘ಸಾರ್ಥ’ ಸೃಜನಶೀಲವಾಗಿ ಅನ್ವೇಷಿಸುತ್ತದೆ...
Add to Cartತನ್ನೂರು ಬಸವನಪುರದ ಚನ್ನಕೇಶವ ದೇವಾಲಯದಲ್ಲಿದ್ದ ದೊಡ್ಡ ಸರಸ್ವತಿ ವಿಗ್ರಹವನ್ನು ಕಳ್ಳಸಾಗಾಣೆದಾರರು ಮಾಯ ಮಾಡಿದ್ದಾರೆಂಬ ಸುದ್ದಿ ತಿಳಿದ ಪ್ರತ್ರಿಕಾಸಂಪಾದಕ ರವೀಂದ್ರ ಅಲ್ಲಿಗೆ ಹೋಗುತ್ತಾನೆ .ಅಲ್ಲಿಂದ ಆರಂಭವಾಗಿ ಇಡೀ ಸ್ವಾತಂತ್ರ್ಯೋತ್ತರ ಭಾರತದ ನಾಡಿಯ ಕಥೆಯು ಬೆಳೆಯುತ್ತದೆ. ಬೆಂಗಳೂರು, ಬಸವನಪುರ, ಜೋಗಿ ಹಳ್ಳಿ, ಮೈಸೂರು, ದಿಲ್ಲಿ, ಬನಾರಸ್, ಪಟ್ಣ, ಕಲ್ಕತ್ತಾ…., ಸಂಗೀತ , ಶಿಕ್ಷಣ, ವೃತ್ತಪತ್ರಿಕೆ, ಉದ್ಯಮ, ನಿರ್ಯಾತ, ಮೊದಲಾದ ವ್ಯಾಪ್ತಿಗಳಿಗೆ ಪಾತ್ರಗಳ ಸ್ವಂತ ಅನುಭವದ ಮೂಲಕ ಜೀವ ಕೊಟ್ಟು ಆಕಾರದ ಐಕ್ಯವನ್ನು ಸಾಧಿಸಿ ಈ ಕಾದಂಬರಿಯು ಸಮಕಾಲೀನ ವಸ್ತುವನ್ನು ಕಲೆಯಾಗಿಸುವ ನಿರ್ಲಿಪ್ತಿಯನ್ನು ಪಡೆದಿದೆ...
Add to Cartತನ್ನನ್ನು ಅವಿಚಿಕೊಂಡ ಅನ್ಯಾಯಗಳನ್ನು ಎತ್ತಿ ಎಸೆಯುವ ಭಾವಶಕ್ತಿ ಇಲ್ಲದ ಮನಸ್ಸು ತನ್ನನ್ನು ತಾನೇ ನಾಶಮಾಡಿಕೊಳ್ಳುವ ತನ್ನನ್ನು ಪ್ರೀತಿಸುವವರ ಮೇಲೆ ಕ್ರೌರ್ಯವನ್ನು ಮಸೆಯುವ ವಿಕೃತಿಗೆ ತಿರುಗಿರುವುದೇ ‘ ಅಂಚು’ವಿನ ವಸ್ತುವಾಗಿದೆ.ಜೀವನಪ್ರೀತಿ ಮತ್ತು ಸಾವಿನ ಪ್ರಪಾತಗಳ ಅಂಚಿನಲ್ಲಿ ನಿಂತಿರುವ ವ್ಯಕ್ತಿಯನ್ನು ತನ್ನತ್ತ ಸೆಳೆದುಕೊಳ್ಳಲು ಬೇಕಾದ ಪ್ರೀತಿಯು ಈ ಕ್ರೌರ್ಯಕ್ಕೆ ವಿರುದ್ದತೂಕವನ್ನು ಸೃಷ್ಟಿಸುತ್ತದೆ.ಈ ಸ್ಥೂಲವಸ್ತುವಿನ ಹಂದರದಲ್ಲಿ ಸ್ಪುಟವಾಗಿ ನಿಲ್ಲುವ ಪಾತ್ರಗಳು ಮಾನವಸನ್ನಿವೇಶಗಳು ಹಾಗೂ ಮನಃಪ್ರವೃತ್ತಿಯ ಗುಹ್ಯಸ್ಥಾನಗಳಿಗೆ ಟಾರ್ಚ್ ಹಾಕಿ ತೋರಿಸುವ ತಂತ್ರ ವಿಶ್ಲೇಷಣೆಗಳಿಂದ ಭೈರಪ್ಪನವರು ಈ ಕಾದಂಬರಿಯಲ್ಲಿ ಹೊಸ ದ್ರವ್ಯ ಹಾಗೂ ವಿಧಾನಗಳನ್ನು ಆವಿಷ್ಕರಿಸಿದ್ದಾರೆ...
Add to Cartನೂರ ಎಂಬತ್ತೇಳು ಪುಟಗಳ ಸಂಕ್ಷಿಪ್ತತೆಯಲ್ಲಿ ‘ನೆಲೆ ‘ ಕಾದಂಬರಿಯು ಅರಗಿಸಿಕೊಂಡಿರುವ ಘಟನೆ ಶೋಧನೆ ಚಿಂತನೆಗಳ ಆಳವಿಸ್ತಾರಗಳು ಅದ್ಭುತವಾಗಿವೆ. ನಿರುದ್ವೇಗದಿಂದ ವಸ್ತುವನ್ನು,ಆ ಮೂಲಕ ಜೀವನವನ್ನು ಇಲ್ಲಿ ನೋಡಿರುವ ರೀತಿಯು ಮಾಗಿ ಪಕ್ವವಾದ ದೊಡ್ಡ ಕಲಾವಿದನಿಗೆ ಮಾತ್ರ ಸಾಧ್ಯವಾಗುವಂಥದು.ಮೃತ್ಯುವಿನ ಅಂಚಿಗೆ ಪ್ರಜ್ಞೆಯು ತಲುಪಿದಾಗ ಮಾತ್ರ ಜೀವನದ ನಿಜವಾದ ಮಾಪನವು ಸಾಧ್ಯವೆಂಬ ಮೂಲಭೂತ ಮಾತನ್ನು ಈ ಕೃತಿಯು ಸಾಕಾರಗೊಳಿಸಿಕೊಂಡಿದೆ...
Add to Cartಕುಸ್ತಿಪಟುಗಳ ಬದುಕು ರೋಮಾಂಚಕಾರಿಯಾದಷ್ಟೇ ಗುಂಡಾಂತರಪೂರ್ವವೂ ಅಗಿದೆ. ಕುಸ್ತಿಪಟುವಿಗೆ ದೊರೆಯುವ ಮಾನಸಮ್ಮಾನದ ಹಿಂದೆ ಎಂತಹ ಸಂಯಮ ಬೇಕು ಎನ್ನುವುದು ಯಾರೂ ಆರಿಯರು. ಕುಸ್ತಿಕಣದ ನಿಕಟ ಸಂಪರ್ಕವಿರಿಸಿಕೊಂಡ ಈ ಕಾದಂಬರಿಕಾರರು ಕುಸ್ತಿಪಟುಗಳ ಜೀವನವನ್ನು ಸೌಹಾರ್ದತೆಯಿಂದ ಕಂಡುದೇ ಈ ಕಾದಂಬರಿಯಲ್ಲಿ ವಾಸ್ತವಿಕವಾಗಿದೆ; ಕಲಾತ್ವಕವಾಗಿದೆ...
Add to Cartವ್ಯಾಸ ಮಹರ್ಷಿಗಳ ‘ಮಹಾಭಾರತ’ವನ್ನು ಆಧಾರವಾಗಿಟ್ಟುಕೊಂಡು ರಚಿತವಾಗಿರುವ ಕಾದಂಬರಿ ‘ಪರ್ವ’. ಇದೊಂದು ಮರುಸೃಷ್ಟಿ. ಕಾವ್ಯ ಇತಿಹಾಸ ಪುರಾಣಗಳ ಮಿಶ್ರಣವಾದ ಪ್ರಾಚೀನ ಮಹಾಕೃತಿಯೊಂದನ್ನು ಆಧುನಿಕ ಸಾಹಿತ್ಯಪ್ರಕಾರವಾದ ಕಾದಂಬರಿಯನ್ನಾಗಿ ನಿರ್ಮಿಸುವ ಪ್ರಕ್ರಿಯೆಯಲ್ಲಿ, ಶ್ರೇಷ್ಠ ಕಾದಂಬರಿಕಾರರೊಬ್ಬರ ಪಕ್ವವಾದ ಮನಸ್ಸು ಕಾಲ ದೇಶಗಳನ್ನು ದಾಟಿ ಹೇಗೆ ಕೆಲಸ ಮಾಡಿದೆ ಎಂಬುದನ್ನು ಇಲ್ಲಿ ನೋಡಬಹುದು. ಸೃಜನಶೀಲ ಪ್ರತಿಭೆಯ ಸಾಹಸ ಈ ಬೃಹತ್ಕಾದಂಬರಿಯ ಪುಟಪುಟಗಳಲ್ಲಿ ಸ್ಫುಟಗೊಂಡಿದೆ. ಮೂಲಕೃತಿಯ ಅಲೌಕಿಕ ಅಂಶಗಳಿಂದ ಪಾರಾಗಿ, ಸಾಮಾನ್ಯರನ್ನೂ ಅಸಾಮಾನ್ಯರನ್ನೂ ಒಂದೇ ದೃಷ್ಟಿಯಿಂದ ನೋಡಿ, ಆದರ್ಶ ವಾಸ್ತವತೆಗಳನ್ನು ಮೇಳವಿಸಿ, ಯಾವುದೋ ಕಾಲದ ವ್ಯಕ್ತಿ ಸಂಗತಿಗಳು ನಮ್ಮ ಕಾಲದವಾಗಿ, ನಮಗೆ ತೀರ ಹತ್ತಿರದವಾಗಿ ಮಾರ್ಪಡುವ ಕಲಾಕೌಶಲವನ್ನು ಈ ಕಾದಂಬರಿ ತೋರಿಸುತ್ತದೆ. ಕಾದಂಬರಿಕಾರರಿಗಿರುವ ಮಾನವಸ್ವಭಾವದ ನಿಕಟ ಪರಿಚಯ, ಈ ಪರಿಚಯವನ್ನು ತೋರುವಲ್ಲಿ ಅವರು ಮೆರೆಯುವ ಸಂಯಮ ಹಾಗೂ ಅಲಿಪ್ತತೆಗಳು ವ್ಯಾಸಗುಣಗಳೇ ಆಗಿವೆ. ಫಲವಾಗಿ ‘ಪರ್ವ’ ನಮ್ಮ ಕಾಲದ ಒಂದು ಶ್ರೇಷ್ಠ ಕಲಾಕೃತಿಯಾಗಿದೆ...
Add to Cartಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ ‘ಗೃಹಭಂಗ’ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ ಚಿತ್ರ ಕಾಣುವುದಿಲ್ಲ. ಈ ಕಾದಂಬರಿಯಲ್ಲಿ ಭೈರಪ್ಪನವರು ಸಾಧಿಸಿರುವ ತಂತ್ರಕೌಶಲ, ಜೀವನಗ್ರಹಿಕೆ ಬುದ್ಧಿಭಾವ, ಇಂದ್ರಿಯಾತ್ಮಕ ಚಿತ್ರಗಳ ಸಮರಸ ಹದವು ಕನ್ನಡ ಕಾದಂಬರೀಲೇಖನದಲ್ಲಿ ಒಂದು ಮುಖ್ಯ ಹಂತವಾಗಿ ನಿಂತಿದೆ...
Add to Cartಗ್ರಹಣ, ಅಸತ್ಯವು ಸತ್ಯವನ್ನು ಆವರಿಸುವ ಕ್ರಿಯೆ. ಸಮಾಜೋದ್ಧಾರಕ್ಕೆ ಅಗತ್ಯವಾದುದು ವ್ಯಕ್ತಿಯ ವರ್ಚಸ್ಸೊ ಅಥವಾ ಸಂಘಟನೆಯ ಧ್ಯೇಯವೊ? ನಾಮರೂಪಾತ್ಮಕ ಪ್ರಪಂಚದ ಉಪಾಧಿಗಳು ಆತ್ಮೋನ್ನತಿಗೆ ತಡೆಗಳಾದರೆ ಅದೇ ಉಪಾಧಿಗಳು ಸಮಾಜೋದ್ದಾರದ ಸಾದನಗಳಾತ್ತವೆಯೆ?ಹೀಗೆ ಸನ್ಯಾಸಿಯ ಸತ್ಯಾನ್ವೇಷಣೆ ಮತ್ತು ಸಮಾಜದಲ್ಲಿ ಸ್ಥಾಪಿತವಾಗಿರುವ ನಂಬಿಕೆಗಳ ನಡುವೆ ಏರ್ಪಡುವ ಮೌಲ್ಯ ಸಂಘರ್ಷದ ವಿವಿಧ ಮಜಲುಗಳನ್ನು ಪರಾಮರ್ಶಿಸುವ ಕಾದಂಬರಿ ಗ್ರಹಣ...
Add to Cartಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ ‘ಗೃಹಭಂಗ’. ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುವ ಈ ಕಾದಂಬರಿ, ಬದುಕಿಗೆ ಬದುಕೇ ಬರೆದ ಭಾಷ್ಯ.‘ಗೃಹಭಂಗ’ ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಎಲ್ಲ ಭಾಷೆಗಳ ಓದುಗರನ್ನು ಸೆರೆಹಿಡಿದು, ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಅಗ್ರಮಾನ್ಯತೆ ಪಡೆದಿದೆ...
Add to Cartಗೋವನ್ನು ಸರ್ವದೇವತೆಗಳ ಸ್ವರೂಪವೆಂದು ಪೂಜಿಸುವ ಕಾಳಿಂಗಜ್ಜ ಮತ್ತು ಅದು ಹಾಲು ಮಾಂಸಗಳನ್ನು ಕೊಡುವ ಪ್ರಾಣಿ ಮಾತ್ರ ಎಂದು ಭಾವಿಸುವ ಆಮೆರಿಕೆಯಿಂದ ಹಿಂತಿರುಗಿದ ಮೊಮ್ಮಗ, ಇವರ ಮೌಲ್ಯಸಂವೇದನೆಗಳ ನಡುವೆ ನಡೆಯುವ ತಿಕ್ಕಾಟವೇ ಈ ಕಾದಂಬರಿಯ ವಸ್ತು.ಪ್ರಾಯಶಃ ಭಾರತದ ಎಲ್ಲ ಭಾಷೆಗಳಲ್ಲೂ ಪ್ರಚಲಿತವಿರುವ ಗೋವಿನ ಹಾಡಿನ ಹಿನ್ನಲೆಯಲ್ಲಿ ಆರಂಭವಾಗುವ ಕಾದಂಬರಿಯು, ಭಾರತೀಯ ಸಂಸ್ಕೃತಿಯ ಮೂಲ ಬೇರುಗಳನ್ನು ಹಿನ್ನಲೆಯಲ್ಲಿ ಕಾಣಿಸುತ್ತದೆ. ಈ ಕೃತಿಯನ್ನಾಧರಿಸಿ ಕನ್ನಡ ಮತ್ತು ಹಿಂದಿಯಲ್ಲಿ ನಿರ್ಮಿಸಿರುವ ಚಲನ ಚಿತ್ರಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮನ್ನಣೆ ಪಡೆದಿವೆ. ಈ ಕಾದಂಬರಿಯ ಹಿಂದೀ ಅನುವಾದವೂ ಅಪಾರವಾದ ಮೆಚ್ಚುಗೆ ಪಡೆದಿದೆ.ಇದೊಂದು ಉತ್ಕೃಷ್ಟ ಸಾಹಿತ್ಯಕೃತಿ ಎಂದು ಭಾವಿಸುವವರಿರುವಂತೆಯೇ, ಪ್ರಗತಿವಿರೋಧಿ,ಪ್ರತಿಗಾಮಿ ಮೌಲ್ಯಗಳನ್ನು ಪ್ರತಿಪಾದಿಸುವ ತೀರ ಕಳಪೆ ಕಾದಂಬರಿ ಎಂದು ಇದನ್ನು ದೇಷಿಸುವವರೂ ಇದ್ದಾರೆ. ಪ್ರೀತಿ ದ್ವೇಷಗಳೆರಡನ್ನೂ ಪ್ರಚೋದಿಸುವ ಈ ಗುಣವು ಕಾದಂಬರಿಯ ಶಕ್ತಿಯ ಗುರುತಾಗಿದೆ...
Add to Cartಸೃಷ್ಟಿಶಕ್ತಿಯಿಂದ ವಿಜೃಂಭಿಸುವ ಜೀವನಪ್ರವೃತ್ತಿ ಮತ್ತು ಆ ಶಕ್ತಿಯನ್ನು ಹತ್ತಿಕ್ಕುವ ಜೀವನಪರಿಸ್ಥಿತಿಯ ತಾಕಲಾಟವೇ ‘ಜಲಪಾತ’ದ ಕಥಾವಸ್ತು. ನೀರು ಮತ್ತು ಮಣ್ಣಿನ ಶಕ್ತಿಯಿಂದ ಕಂಗೊಳಿಸುವ ವನಶ್ರೀ, ಗಂಡು ಹೆಣ್ಣುಗಳ ಮೂಲಶಕ್ತಿಯಾದ ಜೀವನವಿಕಾಸ, ಮತ್ತು ಬೌದ್ಧಿಕಸ್ತರದಲ್ಲಿ ಆವಿರ್ಭವಿಸುವ ಕಲಾಸೌಂದರ್ಯ-ಇವು ಮೂರು, ವಿವಿಧಸ್ತರಗಳಲ್ಲಿ ಪ್ರಕಟವಾಗುವ ಒಂದೇ ಮೂಲಶಕ್ತಿ ಎಂಬುದನ್ನು ಕಾದಂಬರಿಯ ಅಂಗಗಳಾಗಿ ಬೆಳೆದಿರುವ ಪ್ರತೀಕಗಳು ಎತ್ತಿತೋರಿಸುತ್ತವೆ. ಸಂಯೋಗದ ಕರೆ ಮತ್ತು ಕ್ರಿಯೆ, ಗರ್ಭದ ವಿಕಾಸ, ಜನನಕ್ಕೆ ಪೂರ್ವಭಾವಿಯಾದ ನೋವಿನ ಅನುಭವ, ಮೊದಲಾದ ಸೃಷ್ಟಿಯ ಹಲವು ಹಂತಗಳನ್ನು ಅನುಭವದ ಹೊಚ್ಚ ಹೊಸತನದಿಂದ ಭಾಷೆಯಲ್ಲಿ ಹಿಡಿದಿಡಲು ಅನುಕೂಲವಾಗುವಂತೆ ಕಾದಂಬರಿಯ ಕತೆಯು, ಅದರ ಮೂಲ ಪಾತ್ರಗಳಾದ ಒಂದು ಗಂಡು ಮತ್ತು ಅದರ ಹೆಣ್ಣಿನ ಸ್ವಂತ ಅನುಭವದ ವರ್ಣನೆಯ ರೀತಿಯಲ್ಲಿ ಸಾಗುತ್ತದೆ...
Add to Cartಬದುಕಿನ ಸೂಕ್ಷ್ಮ, ಸಂಕೀರ್ಣ ನೆಲೆಗಳ ಆಳಕ್ಕಿಳಿದು ಪ್ರಖರವಾದ ವೈಚಾರಿಕ, ತಾತ್ತ್ವಿಕ, ಮಾನವೀಯ ಅಂಶಗಳನ್ನು ಸಂವೇದನಾಶೀಲತೆಯಿಂದ ಶೋಧಿಸುವ ಕಾದಂಬರಿ ‘ವಂಶವೃಕ್ಷ’. ಹಿಂದಿ, ಮರಾಠಿ, ಗುಜರಾತಿ, ತೆಲುಗು, ಉರ್ದು, ಇಂಗ್ಲಿಷ್ ಮೊದಲಾಗಿ ಹಲವು ಭಾಷೆಗಳಿಗೆ ಅನುವಾದಿತವಾಗಿ ಭಾರತದ ಶ್ರೇಷ್ಠ ಕಾದಂಬರಿಗಳಲ್ಲೊಂದು ಎಂಬ ಮನ್ನಣೆಯನ್ನು ಗಳಿಸಿಕೊಂಡಿದೆ.ಬದುಕಿನ ಬೇರುಗಳನ್ನು ಶೋಧಿಸುವ ಈ ಸಾಹಿತ್ಯಕೃತಿಯನ್ನು ಓದುವುದೇ ಒಂದು ವಿಶಿಷ್ಟ ಅನುಭವ...
Add to Cartಗಂಡುಹೆಣ್ಣಿನ ಸಂಬಂಧದ ವಿಶ್ಲೇಷಣೆಯು ಪ್ರಪಂಚದ ಎಲ್ಲ ಪ್ರಮುಖ ಸಾಹಿತ್ಯ ಕೃತಿಗಳಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಾಣಿಸಿಕೊಳ್ಳುತ್ತದೆ.ನಲವತ್ತೆಂಟು ವರ್ಷ ಕಳೆದರೂ ಪದೇ ಪದೇ ಮರುಮುದ್ರಣ ಕಾಣುತ್ತಾ ಸಾಗಿರುವ ಈ ಕೃತಿಯ ಸಶಕ್ತ ಸನ್ನಿವೇಶ, ಜೀವಂತ ಪಾತ್ರಚಿತ್ರಣ ಮೊದಲಾದ ಗುಣಗಳಿಂದ ನಮ್ಮನ್ನು ನೆನಪಿನಲ್ಲಿ ಮುಳುಗಿಸುತ್ತದೆ...
Add to Cartವ್ಯಾಸ ಮಹರ್ಷಿಗಳ ‘ಮಹಾಭಾರತ’ವನ್ನು ಆಧಾರವಾಗಿಟ್ಟುಕೊಂಡು ರಚಿತವಾಗಿರುವ ಕಾದಂಬರಿ ‘ಪರ್ವ’. ಇದೊಂದು ಮರುಸೃಷ್ಟಿ. ಕಾವ್ಯ ಇತಿಹಾಸ ಪುರಾಣಗಳ ಮಿಶ್ರಣವಾದ ಪ್ರಾಚೀನ ಮಹಾಕೃತಿಯೊಂದನ್ನು ಆಧುನಿಕ ಸಾಹಿತ್ಯಪ್ರಕಾರವಾದ ಕಾದಂಬರಿಯನ್ನಾಗಿ ನಿರ್ಮಿಸುವ ಪ್ರಕ್ರಿಯೆಯಲ್ಲಿ, ಶ್ರೇಷ್ಠ ಕಾದಂಬರಿಕಾರರೊಬ್ಬರ ಪಕ್ವವಾದ ಮನಸ್ಸು ಕಾಲ ದೇಶಗಳನ್ನು ದಾಟಿ ಹೇಗೆ ಕೆಲಸ ಮಾಡಿದೆ ಎಂಬುದನ್ನು ಇಲ್ಲಿ ನೋಡಬಹುದು. ಸೃಜನಶೀಲ ಪ್ರತಿಭೆಯ ಸಾಹಸ ಈ ಬೃಹತ್ಕಾದಂಬರಿಯ ಪುಟಪುಟಗಳಲ್ಲಿ ಸ್ಫುಟಗೊಂಡಿದೆ. ಮೂಲಕೃತಿಯ ಅಲೌಕಿಕ ಅಂಶಗಳಿಂದ ಪಾರಾಗಿ, ಸಾಮಾನ್ಯರನ್ನೂ ಅಸಾಮಾನ್ಯರನ್ನೂ ಒಂದೇ ದೃಷ್ಟಿಯಿಂದ ನೋಡಿ, ಆದರ್ಶ ವಾಸ್ತವತೆಗಳನ್ನು ಮೇಳವಿಸಿ, ಯಾವುದೋ ಕಾಲದ ವ್ಯಕ್ತಿ ಸಂಗತಿಗಳು ನಮ್ಮ ಕಾಲದವಾಗಿ, ನಮಗೆ ತೀರ ಹತ್ತಿರದವಾಗಿ ಮಾರ್ಪಡುವ ಕಲಾಕೌಶಲವನ್ನು ಈ ಕಾದಂಬರಿ ತೋರಿಸುತ್ತದೆ. ಕಾದಂಬರಿಕಾರರಿಗಿರುವ ಮಾನವಸ್ವಭಾವದ ನಿಕಟ ಪರಿಚಯ, ಈ ಪರಿಚಯವನ್ನು ತೋರುವಲ್ಲಿ ಅವರು ಮೆರೆಯುವ ಸಂಯಮ ಹಾಗೂ ಅಲಿಪ್ತತೆಗಳು ವ್ಯಾಸಗುಣಗಳೇ ಆಗಿವೆ. ಫಲವಾಗಿ ‘ಪರ್ವ’ ನಮ್ಮ ಕಾಲದ ಒಂದು ಶ್ರೇಷ್ಠ ಕಲಾಕೃತಿಯಾಗಿದೆ...
Add to Cartಎಷ್ಟೋ ಹೊತ್ತಿನ ನಂತರ ಭೋಸ್ಲೆಯ ಧ್ವನಿ: ‘ಕಲೆಯನ್ನ ನೋಡಿದಾಗ ಸ್ವರ್ಗಪ್ರವೇಶ ಮಾಡಿದ ಹಾಗಾಗುತ್ತೆ. ಕಲಾವಿದನ ಒಳ ಹೊಕ್ಕಾಗ ಬೇರೆಯೇ ಇರುತ್ತೆ ಯಾಕೆ ಈ ಕಾಂಟ್ರಡಿಕ್ಷನ್ ?’..
Add to Cartಬದುಕಿನ ಸೂಕ್ಷ್ಮ, ಸಂಕೀರ್ಣ ನೆಲೆಗಳ ಆಳಕ್ಕಿಳಿದು ಪ್ರಖರವಾದ ವೈಚಾರಿಕ, ತಾತ್ತ್ವಿಕ, ಮಾನವೀಯ ಅಂಶಗಳನ್ನು ಸಂವೇದನಾಶೀಲತೆಯಿಂದ ಶೋಧಿಸುವ ಕಾದಂಬರಿ ‘ವಂಶವೃಕ್ಷ’. ಹಿಂದಿ, ಮರಾಠಿ, ಗುಜರಾತಿ, ತೆಲುಗು, ಉರ್ದು, ಇಂಗ್ಲಿಷ್ ಮೊದಲಾಗಿ ಹಲವು ಭಾಷೆಗಳಿಗೆ ಅನುವಾದಿತವಾಗಿ ಭಾರತದ ಶ್ರೇಷ್ಠ ಕಾದಂಬರಿಗಳಲ್ಲೊಂದು ಎಂಬ ಮನ್ನಣೆಯನ್ನು ಗಳಿಸಿಕೊಂಡಿದೆ.ಬದುಕಿನ ಬೇರುಗಳನ್ನು ಶೋಧಿಸುವ ಈ ಸಾಹಿತ್ಯಕೃತಿಯನ್ನು ಓದುವುದೇ ಒಂದು ವಿಶಿಷ್ಟ ಅನುಭವ...
Add to Cartಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ ‘ಗೃಹಭಂಗ’. ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುವ ಈ ಕಾದಂಬರಿ, ಬದುಕಿಗೆ ಬದುಕೇ ಬರೆದ ಭಾಷ್ಯ.‘ಗೃಹಭಂಗ’ ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಎಲ್ಲ ಭಾಷೆಗಳ ಓದುಗರನ್ನು ಸೆರೆಹಿಡಿದು, ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಅಗ್ರಮಾನ್ಯತೆ ಪಡೆದಿದೆ...
Add to Cartನಲವತ್ತು ವರ್ಷಗಳ ಹಿಂದೆ ‘ಪರ್ವ’ದಲ್ಲಿ ದ್ರೌಪದಿ, ಕುಂತಿ, ಗಾಂಧಾರಿಯರನ್ನು ಚಿತ್ರಿಸಿದ ಭೈರಪ್ಪನವರು ಇಲ್ಲಿ ರಾಮಕಥೆ ಯನ್ನು ಸೀತೆಯ ಅನುಭವ ಮತ್ತು ಚಿಂತನೆಯ ಮೂಲಕ ಮೂಡಿಸಿದ್ದಾರೆ. ಮೂಲ ವಾಲ್ಮೀಕಿ ರಾಮಾಯಣದಲ್ಲಿ ಸೀತಾ ಪರಿತ್ಯಾಗವು ಉತ್ತರ ಕಾಂಡದಲ್ಲಿ ಬರುತ್ತದೆ.‘ಜೋಡಿ ಹಕ್ಕಿಗಳಲ್ಲಿ ಬೇಡನು ಒಂದನ್ನು ಹೊಡೆದು ಅಗಲಿಸಿದ ನೋವಿನ ಭಾವವನ್ನು ವ್ಯಕ್ತಪಡಿಸಲು ನಾನು ರಾಮ ಸೀತೆಯರ ಜೀವನವನ್ನು ಬಳಸಿಕೊಂಡೆ. ಇದನ್ನಾದರೂ ಸುಖಾಂತ್ಯ ಮಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಕವಿಯು ಏನನ್ನು ತಾನೆ ಬದಲಿಸಬಲ್ಲ? ಎಂಬ ವೈಫಲ್ಯ ಬಾಧಿಸುತ್ತಿದೆ,’ ಎಂದು ವಾಲ್ಮೀಕಿಮಹರ್ಷಿಗಳು ಶೋಕದಲ್ಲಿ ಮುಳುಗುತ್ತಾರೆ...

Add to Cart